ಬಂಟ್ವಾಳ: ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ: ಗಾಯಾಳು ವಿಟ್ಲ ಮೆಸ್ಕಾಂ ನ ಎ.ಇ ಪ್ರವೀಷ್ ಜೋಶಿ ಮೃತ್ಯು
ಬಂಟ್ವಾಳ: ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಮೃತಪಟ್ಟಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ಎರಡು ಕಾರು ಹಾಗೂ ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಗಂಭೀರ ವಾಗಿ ಗಾಯಗೊಂಡಿದ್ದರು. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ.ಪ್ರವೀಣ್ ಜೋಶಿ ಅವರ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಳಿಕ ಹಿಂಬದಿಯಿಂದ ಬಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿಂದ ತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು.
112 ಹೊಯ್ಸಳ ಪೋಲೀಸ್ ವಾಹನ ಚಾಲಕ ವಿಶ್ವನಾಥ ಅವರು ಗಾಯಳು ಜೋಶಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.





