February 2, 2026

ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧದ ಅವಹೇಳನಕಾರಿ ಹೇಳಿಕೆ: ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಗೆ ಸಮನ್ಸ್ ಜಾರಿ

0
image_editor_output_image-427219452-1666346071805.jpg

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿರುದ್ಧದ ಅವಹೇಳನಕಾರಿ ಹೇಳಿಕೆಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರಿಗೆ ಸಮನ್ಸ್ ನೀಡಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಎನ್‌ಸಿಡಬ್ಲ್ಯೂ, ಅಕ್ಟೋಬರ್ 26ರಂದು ಮಧ್ಯಾಹ್ನ 12.30 ಕ್ಕೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ಕಳುಹಿಸಿದೆ ಎಂದು ಹೇಳಿದೆ.

ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಿಶ್ವೇಶ್ವರ್ ಭಟ್ ಅವರು ತಮ್ಮ ಅಂಕಣದಲ್ಲಿ ಅವಮಾನಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿತ್ತು.

Leave a Reply

Your email address will not be published. Required fields are marked *

error: Content is protected !!