February 2, 2026

‘ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ’ – ಸಿದ್ದರಾಮಯ್ಯ

0
IMG-20221021-WA0036.jpg

ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ – ಸಿದ್ದರಾಮಯ್ಯಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ ಹಾಕಿದೆ. ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು ಎಂದು ಬಿಜೆಪಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿದ್ಯಾರ್ಥಿಗಳಿಗೆ ಹಾಲು,‌ ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಈಗ ಅವರಿಂದ ದುಡ್ಡು‌ಕಿತ್ತುಕೊಳ್ಳಲು ಹೊರಟಿದೆ ಎಂದಿದೆ.

ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ‌ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದಿದ್ದಾರೆ.

ಇನ್ನು ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು,‌ ಶೂ ಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ ಎಂದರು.

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!