ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಬೊಮ್ಮಾಯಿ ನಿವಾಸಕ್ಕೆ ಕಾಂಗ್ರೆಸ್‌ನಿಂದ ಪ್ರತಿಭಟನಾ ರ್‍ಯಾಲಿ
ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಬೆಂಗಳೂರಿನ ಆನಂದ್ ರಾವ್ ವೃತ್ತದ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ನಿವಾಸಕ್ಕೆ ಮೆರವಣಿಗೆ ನಡೆಸಲು ಮುಂದಾದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ಮಾರ್ಗಮಧ್ಯೆ ತಡೆದು ವಶಕ್ಕೆ ಪಡೆಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೆರವಣಿಗೆಯ ವೇಳೆ ಶೇ.40 ಫರ್ಸೆಂಟ್ ಕಮಿಷನ್ ಬಿಜೆಪಿ ಸರಕಾರಕ್ಕೆ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಮಾರ್ಗಮಧ್ಯೆ ತಡೆದು ವಶಕ್ಕೆ ಪಡೆಕೊಂಡಿದ್ದಾರೆ.

ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಶಾಸಕರಾದ ದಿನೇಶ್ ಗುಂಡೂರಾವ್, ರಿಝ್ವಾನ್ ಅರ್ಶದ್, ಮಾಜಿ ಶಾಸಕ ಪ್ರಿಯಕೃಷ್ಣ, ಮಾಜಿ ಮೇಯರ್ ಪದ್ಮಾವತಿ ಸೇರಿದಂತೆ ಮತ್ತಿತರರು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.




