ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ವರ್ಗಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ವರ್ಗಾವಣೆಗೊಂಡಿದ್ದಾರೆ.
ದ.ಕ ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ ಕುಮಾರ್ ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ
17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಮತ್ತು 4 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಇಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.




