March 23, 2026

ಬೀದಿ ನಾಯಿಗಳ ದಾಳಿಗೆ 5 ವರ್ಷದ ಮಗು ಮೃತ್ಯು

0
image_editor_output_image-479938714-1666417938617.jpg

ಭೋಪಾಲ್: ಬೀದಿ ನಾಯಿಗಳ ದಾಳಿಗೆ ಸಿಲುಕಿದ ಐದು ವರ್ಷದ ಮಗುವೊಂದು ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಖರ್ಗೋನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟ ಮಗುವನ್ನು ಸೋನಿಯಾ ಎಂದು ಗುರುತಿಸಲಾಗಿದೆ.

ಬೀದಿ ನಾಯಿಗಳ ದಾಳಿಯಿಂದ ಮಗುವಿನ ಕುತ್ತಿಗೆ ಸೇರಿದಂತೆ ದೇಹದ ಇತರ ಭಾಗಗಳಲ್ಲಿ ಗಂಭೀರ ಗಾಯವಾಗಿದೆ. ಅತಿಯಾದ ರಕ್ತಸ್ರಾವದಿಂದ ಬಾಲಕಿ ಸಾವನ್ನಪ್ಪಿದ್ದಾಳೆ.

ಬೆಡಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಬಕಾವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ ಬಾಲಕಿ ಸಮೀಪದ ಅಂಗಡಿಗೆ ಹೋಗುತ್ತಿದ್ದಾಗ ರಸ್ತೆಯಲ್ಲಿ ಅರ್ಧ ಡಜನ್ ನಾಯಿಗಳು ದಾಳಿ ನಡೆಸಿವೆ. ಕೂಲಿ ಕೆಲಸ ಮಾಡುವ ಆಕೆಯ ತಂದೆ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ವೇಳೆ ನಾಯಿಗಳು ಮಗಳ ಮೇಲೆ ದಾಳಿ ನಡೆಸಿವೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!