February 4, 2026

ಭೂಕುಸಿತದಿಂದ ಮನೆ ಮೇಲೆ ಉರುಳಿ ಬಿದ್ದ ಬಂಡೆಕಲ್ಲು: ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವು

0
image_editor_output_image752331401-1666428584511.jpg

ಗೋಪೇಶ್ವರ್: ಭೂಕುಸಿತದಿಂದ ಮನೆ ಮೇಲೆ ಬಂಡೆ ಉರುಳಿ ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಶುಕ್ರವಾರ ಮಧ್ಯರಾತ್ರಿ ಕಳೆದ ಬಳಿಕ 1 ಗಂಟೆ ಸುಮಾರಿಗೆ ಪಿಂಡಾರ್ ಕಣಿವೆಯ ಪೈಂಗರ್ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ. ಬಳಿಕ ಈ ಪ್ರದೇಶದಲ್ಲಿದ್ದ ಮೂರು ಮನೆಗಳ ಮೇಲೆ ಬೃಹತ್ ಗಾತ್ರದ ಬಂಡೆಗಳು ಉರುಳಿ ಬಿದ್ದಿವೆ. ಮೂರು ಮನೆಗಳು ನೆಲಸಮವಾಗಿದ್ದು, ಅವಶೇಷಗಳಡಿ ಸಿಲುಕಿದ್ದ ಐವರನ್ನು ಹೊರ ತೆಗೆಯಲಾಗಿದೆ. ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ರವೀಂದ್ರ ಕುಮಾರ್ ಜುವಾಂತ ತಿಳಿಸಿರುವುದಾಗಿ ವರದಿಯಾಗಿದೆ.

ಸಾವನ್ನಪ್ಪಿದವರ ಪೈಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಅಸುನೀಗಿದ್ದರೆ, ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. ಓರ್ವ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!