ರಾಜ್ಯದಲ್ಲಿ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ
ಬೆಂಗಳೂರು: ಕರ್ನಾಟಕದಲ್ಲಿ ಆಜಾನ್ ದಂಗಾಲ್ ಹಿನ್ನೆಲೆ ಪರವಾನಗಿ ಇಲ್ಲದೇ ಲೌಡ್ ಸ್ಪೀಕರ್ ಬಳಸುವಂತಿಲ್ಲ ಎಂದು ಸರ್ಕಾರ ನಿರ್ಬಂಧ ಹೇರಿತ್ತು. ಆ ಬಳಿಕ ಇದೀಗ ಪರವಾನಿಗೆ ನೀಡಿ ಒಟ್ಟು 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದೆ.
ಆಜಾನ್ ವಿರುದ್ಧ ವಿರೋಧ ಕೇಳಿ ಬಂದ ಬಳಿಕ ರಾಜ್ಯ ಸರ್ಕಾರ ಲೌಡ್ ಸ್ಪೀಕರ್‌ಗೆ ಬ್ರೇಕ್ ಹಾಕಲು ಮುಂದಾಗಿತ್ತು. ಪರವಾನಗಿ ಇಲ್ಲದೇ ಲೌಡ್ ಸ್ಪೀಕರ್ ಬಳಸುವಂತಿಲ್ಲ ಎಂದು ನಿರ್ಬಂಧ ಹೇರಲಾಗಿತ್ತು. ಆ ಬಳಿಕ ಪರವಾನಿಗೆ ನೀಡಲು ಮಸೀದಿ, ದೇವಾಲಯ, ಚರ್ಚ್‍ಗಳಿಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿತ್ತು. ಪರವಾನಗಿ ನೀಡುವ ಅಧಿಕಾರವನ್ನು ಸರ್ಕಾರ ರಾಜ್ಯ ಪೊಲೀಸರಿಗೆ ನೀಡಿತ್ತು. ಈ ಹಿನ್ನೆಲೆ ಮಂದಿರ, ಮಸೀದಿ, ಚರ್ಚ್‍ಗಳಿಂದ 17 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿ ಕರ್ನಾಟಕ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.




