February 4, 2026

ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ಢಿಕ್ಕಿ: ನಾಲ್ವರು ಸಾವು, 45ಕ್ಕೂ ಅಧಿಕ ಮಂದಿ ಗಾಯ

0
image_editor_output_image2011313605-1666501995330.jpg

ಉತ್ತರ ಪ್ರದೇಶ; ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ಡಂಪರ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಇಟಾವಾ ಬಳಿಯ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಮುಂಜಾನೆ 2.30ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ 45ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಉತ್ತರಪ್ರದೇಶದ ಗೋರಖ್‌ಪುರದಿಂದ ರಾಜಸ್ಥಾನದ ಅಜ್ಮೀರ್‌ಗೆ ಬಸ್ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಂಪರ್‌ನ ಟೈರ್ ಒಡೆದಿದ್ದು, ಹಿಂದಿನಿಂದ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದು ಅಪಘಾತವಾಗಿದೆ. ಗಾಯಾಳುಗಳನ್ನು ಕೂಡಲೇ ಸೈಫೈನಲ್ಲಿರುವ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಅಪಘಾತ ಸ್ಥಳಕ್ಕೆ ಸ್ವತಃ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ಭೇಟಿ ನೀಡಿದ್ದು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!