February 4, 2026

ರಾಜೀವ್ ಗಾಂಧಿ ಪ್ರತಿಷ್ಠಾನದ ಪರವಾನಿಗೆ ರದ್ದು ಮಾಡಿದ ಕೇಂದ್ರ ಸರ್ಕಾರ

0
image_editor_output_image-517121082-1666503782283.jpg

ನವದೆಹಲಿ: ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಯಾದ ರಾಜೀವ್ ಗಾಂಧಿ ಪ್ರತಿಷ್ಠಾನದ (ಆರ್‌ಜಿಎಫ್) ‘ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿ’ಯನ್ನು ಕಾನೂನು ಉಲ್ಲಂಘನೆಯ ಆರೋಪದ ಮೇಲೆ ಕೇಂದ್ರ ಸರ್ಕಾರ ರದ್ದು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020 ರಲ್ಲಿ ಗೃಹ ಸಚಿವಾಲದ ‘ಅಂತರ-ಸಚಿವಾಲಯ ಸಮಿತಿ’ ನಡೆಸಿದ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

‘ಹೌದು, ರಾಜೀವ್ ಗಾಂಧಿ ಪ್ರತಿಷ್ಠಾನದ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದು ಮಾಡಲಾಗಿದೆ. ಅದರ ವಿರುದ್ಧದ ತನಿಖೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರ್‌ಜಿಎಫ್‌ನ ಅಧ್ಯಕ್ಷರಾಗಿದ್ದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ರಸ್ಟಿಗಳಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!