March 22, 2026

ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ: ಕಾರಿನೊಳಗೆ ಕುಳಿತಿದ್ದ ವ್ಯಕ್ತಿಗೆ ಬೆಂಕಿ

0
image_editor_output_image-1943174591-1666507230780.jpg

ಕೊಯಮತ್ತೂರು: ನಗರದ ಉಕ್ಕಡಂ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೊಟ್ಟೈ ಈಶ್ವರನ್ ದೇವಾಲಯದ ಸುತ್ತಮುತ್ತಲಿನ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಎಡಿಜಿಪಿ ಪಿ.ತಾಮರೈ ಕಣ್ಣನ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!