ನ. 14ರಂದು ಭಾರತ ಭೇಟಿ ನೀಡಲಿದ್ದಾರೆ ಸೌದಿ ಯುವರಾಜ
ನವೆಂಬರ್ನಲ್ಲಿ ಸೌದಿ ಅರೇಬಿಯಾ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ನವಂಬರ್ 14ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಮೊಹಮ್ಮದ್ ಬಿನ್ ಸಲ್ಮಾನ್ ಅವರು ನವೆಂಬರ್ 14ರಂದು ಬೆಳಗ್ಗೆ ಭಾರತಕ್ಕೆ ಆಗಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅವರು ಭಾರತ ಭೇಟಿ ಹಮ್ಮಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಇನ್ನು ವಿದೇಶಾಂಗ ಸಚಿವರ ಮೂಲಕ ಸೆಪ್ಟಂಬರ್ನಲ್ಲೇ ಸೌದಿ ಯುವರಾಜನಿಗೆ ಪತ್ರ ಕಳುಹಿಸಲಾಗಿದ್ದು, ಹೀಗಾಗಿ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಬಳಿಕ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ ಜಿ 20 ಶೃಂಗಸಭೆಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.