ಬೆಂಗಳೂರು: ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು
ಬೆಂಗಳೂರಿನ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ನಿಹಾರಿಕಾ ಅವರ ತಂದೆ ನೀಡಿದ ದೂರಿನ ಮೇರೆಗೆ ಪತಿ ಕಾರ್ತಿಕ್ ಹಾಗೂ ಮನೆಯವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇನ್ನು ನಿಹಾರಿಕಾ ಹಾಗೂ ಕಾರ್ತಿಕ್ ಐದು ವರ್ಷಗಳಿಂದ ಪ್ರೀತಿಸಿ ಜೂನ್ ತಿಂಗಳಿನಲ್ಲಿ ಮದುವೆಯಾಗಿದ್ದರು ಎನ್ನಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದ್ದು, ಕೆಲದಿನಗಳ ಹಿಂದೆ ಗಂಡನೊಂದಿಗೆ ಜಗಳವಾಗಿ ನಿಹಾರಿಕಾ ತವರು ಮನೆಗೆ ಸೇರಿದ್ದಳು ಎಂದು ಆಕೆಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.






