ಗ್ಯಾಂಗ್ ರೇಪ್ ಕಥೆ ಕಟ್ಟಿದ ಮಹಿಳೆ, ಮೂವರು ಸಹಚರರು ಅಂದರ್

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರು ಆಸ್ತಿ ಕಬಳಿಸುವ ಉದ್ದೇಶದಿಂದ ಗ್ಯಾಂಗ್ ರೇಪ್ ಕಥೆ ಕಟ್ಟಿದ್ದು, ಆಕೆ ಹಾಗೂ ಮೂವರು ಸಹಚರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರನ್ನು ದೆಹಲಿ ಮೂಲದ ಮಹಿಳೆ ಹಾಗೂ ಆಕೆಗೆ ಸಹಕರಿಸಿದ ಆಜಾದ್, ಅಫ್ಜಲ್ ಮತ್ತು ಗೌರವ್ ಎಂದು ಗುರುತಿಸಲಾಗಿದೆ.
ಐದು ಜನ ನನ್ನನ್ನು ಅಪಹರಿಸಿ ಎರಡು ದಿನಗಳ ಕಾಲ ಗ್ಯಾಂಗ್ ರೇಪ್ ಮಾಡಿದರು ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಬಳಿಕ ತನಿಖೆ ನಡೆಸಿದ ಪೊಲೀಸರರು ಮಹಿಳೆಯ ಮೇಲೆ ವಂಚನೆ ಹಾಗೂ ನಕಲಿ ಸಹಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
