ದೈವಾರಾಧನೆ ಬಗ್ಗೆ ವಿವಾದಾತ್ಮಕ ಹೇಳಿಕೆ – ನಟ ಚೇತನ್ ಅಹಿಂಸಾಗೆ ಪೊಲೀಸ್ ನೋಟಿಸ್
ಭೂತ ಕೋಲ ಹಿಂದೂ ಧರ್ಮದ ಭಾಗವಲ್ಲ ಎಂದು ಹೇಳಿಕೆಗೆ ಸಂಬಂಧಿಸಿದಂತೆ ಕನ್ನಡ ನಟ ಚೇತನ್ ಅಹಿಂಸಾ ಅವರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಲಾಗಿದೆ.
ಕರ್ನಾಟಕ ಪೊಲೀಸರು ಚೇತನ್‌ಗೆ ನೋಟಿಸ್ ಜಾರಿ ಮಾಡಿದ್ದು, ಅವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರ ಮುಂದೆ ಹಾಜರಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಇನ್ನು ಸೂಪರ್‌ಹಿಟ್ ‘ಕಾಂತಾರ’ ಸಿನಿಮಾದಲ್ಲಿ ತೋರಿಸುವ ‘ಭೂತ ಕೋಲ’ ಆಚರಣೆ ಹಿಂದೂ ಧರ್ಮದ ಭಾಗವಲ್ಲ ಎಂದು ಚೇತನ್ ಹೇಳಿ ಆಕ್ರೋಶಕ್ಕೆ ಗುರಿಯಾದ್ದರು.
ಚೇತನ್ ಅವರ ಹೇಳಿಕೆ ನೀಡಿದ್ದಕ್ಕಾಗಿ ಪೊಲೀಸರಿಗೆ ಹಲವು ದೂರುಗಳು ಬಂದಿದ್ದು, ವಿವಿಧ ಜಾತಿಗಳ ನಡುವೆ ಬಿರುಕು ಮೂಡಿಸುವ ಉದ್ದೇಶವನ್ನು ಹೊಂದಿವೆ ಎಂದು ದೂರುದಾರರು ಆರೋಪಿಸಿದ್ದಾರೆ.






