ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ಅತ್ಯಾಚಾರ ಕೇಸ್ ದಾಖಲು
ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ರೇಪ್ ಕೇಸ್ ದಾಖಲು ಮಾಡಲಾಗಿದೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಳು. ಇದೀಗ ಈಕೆ ಸೋದರ ಮಾವನ ಮಗನಾಗಿರುವ ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆ ಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಾವಣಗೆರೆ ಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಲಾಗಿದೆ.
ಆತ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದ್ದಾರೆ. ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ.




