March 22, 2026

ಟ್ರಕ್‌ಗೆ ಕಾರು ಢಿಕ್ಕಿ: ಒಂದೇ ಕುಟುಂಬದ ಐವರು ಮೃತ್ಯು

0
image_editor_output_image-238403191-1666591878786.jpg

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಮುಂಡೇರ್ವಾ ಪ್ರದೇಶದಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಂತ ಕಬೀರ್ ನಗರಕ್ಕೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬಸ್ತಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ.

ಇನ್ನು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಹೊರ ತೆಗೆದಿದ್ದು, ಕಾರು ಟ್ರಕ್‌ನಲ್ಲಿ ಸಿಲುಕಿಕೊಂಡಿದೆ. ಎಲ್ಲಾ ಮೃತ ದೇಹಗಳನ್ನು ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!