ಸುಳ್ಯ: ನಗರ ಪಂಚಾಯತ್‌ನ ಮಾಜಿ ಉಪಾಧ್ಯಕ್ಷೆಯ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ
ಸುಳ್ಯ: ಸುಳ್ಯದಲ್ಲಿ ವ್ಯಕ್ತಿಯೊಬ್ಬರು ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಗುಂಡು ಹಾರಿಸಿಕೊಂಡ ವ್ಯಕ್ತಿಯನ್ನು ಸುಳ್ಯ.ನ.ಪಂ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ರವರ ಪತಿ, ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂದು ಗುರುತಿಸಲಾಗಿದೆ.
ಕೇಶವ ಪ್ರಭು ಅವರು ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.





