April 8, 2025

ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

0

ಲಂಡನ್‌: ರಿಶಿ ಸುನಕ್ ಅವರನ್ನು ಯುನೈಟೆಡ್ ಕಿಂಗ್ಡಮ್ನ ಪ್ರಧಾನಿಯಾಗಿ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಸೋಮವಾರ ಆಯ್ಕೆ ಮಾಡಲಾಗಿದೆ.

ಅವರ ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರು 100 ಸಂಸದರ ಬೆಂಬಲವನ್ನು ಗಳಿಸಲು ವಿಫಲರಾಗಿದ್ದರಿಂದ ಅವರು 190 ಕ್ಕೂ ಹೆಚ್ಚು ಸಂಸದರಿಂದ ಚುನಾಯಿತರಾಗಿದ್ದಾರೆ.

ಪೆನ್ನಿ ಮೊರ್ಡೌಂಟ್ ಟ್ವೀಟ್ನಲ್ಲಿ ತಾನು ರೇಸ್ ನಿಂದ ಹೊರಗುಳಿಯುತ್ತಿದ್ದೇನೆ ಮತ್ತು ಯುಕೆ ಪ್ರಧಾನಿಯಾಗಿ ಸುನಕ್ ಅವರನ್ನು ಬೆಂಬಲಿಸುತ್ತಿದ್ದೇನೆ ಎಂದು ಘೋಷಿಸಿದರು. ಸುನಕ್ ಯುಕೆಯ 57 ನೇ ಪ್ರಧಾನ ಮಂತ್ರಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ.

 

 

ರಿಷಿ ಸುನಕ್ ಹಣಕಾಸು ಸಚಿವ ಹುದ್ದೆಯಲ್ಲಿದ್ದು, 2015ರಲ್ಲಿ ರಿಷಿ ಬ್ರಿಟನ್ ಸಂಸತ್ತನ್ನ ಪ್ರವೇಶಿಸಿದರು. 2020ರಲ್ಲಿ ಬ್ರಿಟನ್ ಸಚಿವ ಸಂಪುಟದ ಪ್ರಮುಖ ಹುದ್ದೆಗಳಲ್ಲಿ ಒಂದಾದ ಹಣಕಾಸು ಸಚಿವರಾದ್ರು. ಅಂದ್ಹಾಗೆ, ಸುನಕ್‌ಈ ಹುದ್ದೆಗೇರಿದ ಭಾರತ ಮೂಲದ ಮೊದಲ ವ್ಯಕ್ತಿಯಾಗಿದ್ದಾರೆ.

ಕೋವಿಡ್ 19 ಸಾಂಕ್ರಾಮಿಕದಿಂದ ಬ್ರಿಟನ್ ತತ್ತರಿಸುತ್ತಿದ್ದ ವೇಳೆ ಆರ್ಥಿಕತೆಯನ್ನ ನಿಭಾಯಿಸುವಲ್ಲಿ ರಿಷಿ ಯಶಸ್ವಿಯಾಗಿದ್ದು, ಕೊರೊನಾ ವೇಳೆ ನಷ್ಟದಿಂದ ತತ್ತರಿಸಿದ್ದ ಉದ್ಯಮಗಳಿಗೆ ಅನುಕೂಲಕರವಾದ ಯೋಜನೆಗಳನ್ನ ಜಾರಿಗೆ ತಂದಿದ್ದರು.

ಇನ್ನು ಪ್ರತಿಷ್ಠಿತ ವಿಂಚೆಸ್ಟರ್‌ ಕಾಲೇಜಿನಲ್ಲಿ ಅಧ್ಯಯನ ನಡೆಸಿರುವ ಸುನಕ್‌, ಆಕ್ಸ್‌ಫರ್ಡ್‌ ವಿವಿಯಲ್ಲಿ ರಾಜಕೀಯ, ಫಿಲಾಸಫಿ ಮತ್ತು ಅರ್ಥಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದುಕೊಂಡಿದ್ದಾರೆ. ಅಮೆರಿಕಾ ಸ್ಟಾನ್‌ಫರ್ಡ್‌ ವಿವಿಯಿಂದ ಎಂಬಿಎ ಪದವಿಯನ್ನೂ ಪಡೆದುಕೊಂಡಿದ್ದಾರೆ.

ಸುನಕ್‌ ತಂದೆ ವೈದ್ಯರಾಗಿದ್ದು, ತಾಯಿ ರಾಸಾಯನಿಕ ವಸ್ತುಗಳ ಅಂಗಡಿ ನಡೆಸುತ್ತಿದ್ದರು. ಇನ್ನು ರಿಷಿ ಇನ್ಫೋಸಿಸ್ ನಾರಾಣಮೂರ್ತಿ ಅಳಿಯ. ಹೌದು, ರಿಷಿ ಸುನಾಕ್ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ಮಗಳು ಅಕ್ಷತಾರನ್ನ ವಿವಾಹವಾಗಿ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇವರಿಗೆ ಕೃಷ್ಣ ಮತ್ತು ಅನುಷ್ಕಾ ಎಂಬ ಇಬ್ಬರು ಮಕ್ಕಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!