ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು
ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿ ಚಿತ್ರಮಂದಿರದಿಂದ ಹೊರಗೆ ಬರುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ, ರಾಜಶೇಖರ್(45) ಎಂದು ಗುರುತಿಸಲಾಗಿದೆ.
ಕಾಂತಾರ ಸಿನಿಮಾವನ್ನು ವೀಕ್ಷಿಸಿದ್ದ ರಾಜಶೇಖರ್ ಅವರಿಗೆ ಥಿಯೇಟರ್ ನಿಂದ ಆಚೆ ಬರುವಾಗ ಎದೆನೋವು ಕಾಣಿಸಿಕೊಂಡಿದ್ದು, ಅಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಕುರಿತು ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.





