February 3, 2026

ಶಿವಮೊಗ್ಗದಲ್ಲಿ ಮತ್ತೆ ಉದ್ವಿಗ್ನತೆ: ಕಲ್ಲು ತೂರಾಟ, ಓರ್ವ ಆಸ್ಪತ್ರೆಗೆ ದಾಖಲು

0
IMG-20221025-WA0011.jpg

ಶಿವಮೊಗ್ಗದಲ್ಲಿ ಮತ್ತೆ ಕಲ್ಲು ತೂರಾಟ ಸಹ ನಡೆಸಲಾಗಿದ್ದು, ಘಟನೆಯಲ್ಲಿ ಪ್ರಕಾಶ್ ಎಂಬವರು ಗಾಯಗೊಂಡಿದ್ದು, ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸೀಗೆಹಟ್ಟಿಯ ಹಿಂದೂ ಕಾರ್ಯಕರ್ತ ಮೃತ ಹರ್ಷ ಕುಟುಂಬಸ್ಥರಿಗೆ ಬೆದರಿಕೆ ಬಂದಿದೆ ಎನ್ನಲಾಗುತ್ತಿದೆ.

ಇನ್ನು ಸೀಗೆಹಟ್ಟಿಯ ನಿವಾಸ, ರವಿ ವರ್ಮ ಬೀದಿ, ಕೆ.ಆರ್ ಪುರಂ ರಸ್ತೆ ಮುಂತಾದೆಡೆ 2 ಬೈಕ್‍ಗಳಲ್ಲಿ ಬಂದ 6 ಮಂದಿ ಯುವಕರು ಮಚ್ಚು-ಲಾಂಗ್ ಹಿಡಿದು ಭಯ ಹುಟ್ಟಿಸಿದ್ದು, ಮತ್ತೊಂದೆಡೆ ಸಿಗೇಹಟ್ಟಿಯಲ್ಲಿ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದ್ದು, ಪ್ರಕಾಶ್ ಎಂಬಾತ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆಯಷ್ಟೇ ಆಜಾದ್ ನಗರದಲ್ಲಿ ಕಾರು ಜಖಂ ಪ್ರಕರಣಕ್ಕೆ ಸಂಬಂಧಿಸಿ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್‍ನಲ್ಲಿ ಬಂದ 10 ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದರು.

ಈ ವೇಳೆ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಹಾನಿಯಾಗಿತ್ತು. ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿದ್ದು, ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಫೆ.20ರಂದು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೀಡಾಗಿದ್ದ.

Leave a Reply

Your email address will not be published. Required fields are marked *

error: Content is protected !!