March 22, 2026

ಮಂಗಳೂರು: ಲಾರಿ ಢಿಕ್ಕಿ, ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಸಾವು

0
Screenshot_2022-10-26-09-32-08-42_680d03679600f7af0b4c700c6b270fe7.jpg

ಮಂಗಳೂರು: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ , ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.

ಅ.೨೬ ರ ಇಂದು ಮುಂಜಾನೆ ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯಲ್ಲಿ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.

ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.‌ ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!