ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.
ಈ ವೇಳೆ ಕಾರ್ಮಿಕನ ಮಗನಾದ ನಾನು, ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ನನ್ನನ್ನು ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ನನ್ನ ಕೆಲಸದಿಂದ, ನನ್ನ ಅನುಭವದೊಂದಿಗೆ, ಪಕ್ಷವನ್ನು ಮೇಲೆತ್ತಲು ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಖರ್ಗೆ ಪ್ರಮಾಣ ವಚನ ಸ್ವೀಕರಿಸಿದರು.




