February 4, 2026

ಶಿವಮೊಗ್ಗ: ಸ್ಥಳ ಮಹಜರಿಗೆ ಕರೆದೊಯ್ಯುತ್ತಿದ್ದ ವೇಳೆ ಪೊಲೀಸ್ ಮೇಲೆ ಚೂರಿ ಇರಿತ, ಆರೋಪಿ ಕಾಲಿಗೆ ಗುಂಡೇಟು

0
image_editor_output_image618251943-1666769619286.jpg

ಶಿವಮೊಗ್ಗ: ಸ್ಥಳ ಮಹಜರಿಗೆ ಕರೆದೊಯ್ಯುತ್ತಿದ್ದ ವೇಳೆ ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸ್ ಸಿಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆತ್ಮರಕ್ಷಣೆಗಾಗಿ ಈ ವೇಳೆ ಪೊಲೀಸ್ ಸಿಬಂದಿಯು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.

ಶಿವಮೊಗ್ಗದ ವೆಂಕಟೇಶನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಯೋಗಿಯಾಗಿದ್ದ ವಿಜಯ್ ಕೊಲೆ ಪ್ರಕರಣ ಸಂಬಂಧಿಸಿ ಜಬೀ, ದರ್ಶನ್, ಕಾರ್ತಿಕ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಆರೋಪಿಗಳ ಪೈಕಿ ಜಬೀ ಎಂಬಾತನನ್ನು ಸ್ಥಳ ಮಹಜರಿಗೆಂದು ಪೊಲೀಸರು ಕರೆದುಕೊಂಡು ಹೋಗುತ್ತಿದ್ದ ವೇಳೆ ಆತ ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸ್ ಸಿಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ.

ಈ ವೇಳೆ ಕುಂಸಿ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.

ಆರೋಪಿಯಿಂದ ನಡೆದ ಹಲ್ಲೆಯಿಂದಾಗಿ ಪೊಲೀಸ್ ಪೇದೆ ರೋಶನ್ ಅವರು ಗಾಯಗೊಂಡಿದ್ದಾರೆ. ಗಾಯಾಳು ಪೇದೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!