February 4, 2026

ಇಂಧನ ಟ್ಯಾಂಕರ್‌ನಲ್ಲಿ ಬೆಂಕಿ: ಇಬ್ಬರು ಮೃತ್ಯು, 20ಕ್ಕೂ ಅಧಿಕ ಮಂದಿಗೆ ಗಾಯ

0
image_editor_output_image-682432024-1666776321020.jpg

ಖಾರ್ಗೋನ್: ಇಂಧನ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮೃತಪಟ್ಟ ಘಟನೆ ಅಂಜನಗಾಂವ್ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬಿಸ್ತಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಟ್ಯಾಂಕರ್ ಇಂದೋರ್‌ನಿಂದ ಖಾರ್ಗೋನ್ ಕಡೆಗೆ ಸಂಚರಿಸುತ್ತಿದ್ದ ವೇಳೆ ಅಂಜನಗಾಂವ ಗ್ರಾಮದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಸ್ಪೋಟಗೊಂಡಿದೆ. ಇದರಿಂದ ಇಬ್ಬರು ಸಾವನ್ನಪ್ಪಿದ್ದಾರೆ.

ಟ್ಯಾಂಕರ್ ಪಲ್ಟಿಯಾಗಿರುವುದನ್ನು ಕಂಡು ಗ್ರಾಮದ ಜನರು ಇಂಧನ ಸಂಗ್ರಹಿಸಲು ಮುಗಿ ಬಿದ್ದಿದ್ದಾರೆ. ಗಾಯಾಳುಗಳನ್ನು ಖಾರ್ಗೋನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಖಾರ್ಗೋನ್ ಶಾಸಕ ರವಿ ಜೋಶಿ ತೊಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!