November 24, 2024

ಅಂಬೇಡ್ಕರ್ ರಕ್ಷಣಾ ವೇದಿಕೆಯ ಮನವಿಗೆ ಸ್ಪಂದಿಸಿದ ಬೆಳ್ಳಾರೆ ಪಿ ಡಿ ಓ ಅಧಿಕಾರಿ

0

ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಕಾವಿನಮೂಲೆ ಪಾಟಾಜೆ ಎಂಬಲ್ಲಿ ಸ್ಥಳೀಯ ನಿವಾಸಿಯೋರ್ವರು ಸಾರ್ವಜನಿಕರು ನಡೆದಾಡುವ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ಕೆಲಸ ಮಾಡುವ ಸಂದರ್ಭದಲ್ಲಿ ಮೇಲಿನಿಂದ ಬಂದಂತ ಮಣ್ಣು ಪಂಚಾಯಿತಿ ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಪಾಟಾಜೆಯ ಸಾರ್ವಜನಿಕರು ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಅ 9 ರಂದು ದೂರು ನೀಡಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪಿ ಸುಂದರ ಪಾಟಾಜೆಯವರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ರಸ್ತೆ ಸರಿಪಡಿಸಿಕೊಡುವಂತೆ ಪಂಚಾಯಿತಿಗೆ ಮನವಿ ಮಾಡಿದ ಹಿನ್ನಲೆಯಲ್ಲಿ ಮನವಿಗೆ ಸ್ಪಂದಿಸಿ ಬೆಳ್ಳಾರೆ ಗ್ರಾಮ ಪಂಚಾಯತಿ ಪಿ ಡಿ ಓ ಅನುಷಾ ರವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ. ಅಧಿಕಾರಿಯ ಈ ಭೇಟಿ ಸ್ಥಳೀಯರಲ್ಲಿ ಪ್ರಶಂಸೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!