November 22, 2024

ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ

0

ಆನೇಕಲ್: ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲ ಎಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಉಳಿಮಂಗಲಂ ನಲ್ಲಿ ಈ ಪ್ರಕರಣ ನಡೆದಿದೆ. ಮೃತನನ್ನು ಶಿವಕುಮಾರ್(19) ಎಂದು ಗುರುತಿಸಲಾಗಿದೆ. ನರ್ಸರಿ ಫಾರ್ಮ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಕುಮಾರ್, ಇದೀಗ ಪೋಷಕರು ಬಟ್ಟೆ ಕೊಡಿಸಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇತ್ತೀಚೆಗೆ ಯುವಕರ ಜೊತೆ ಸೇರಿ ಶಿವಕುಮಾರ್ ಮದ್ಯವ್ಯಸನಿಯಾಗಿದ್ದ. ಈ ಮಧ್ಯೆ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸುವಂತೆ ಪೋಷಕರ ಬಳಿ ಕೇಳಿದ್ದ. ಆದರೆ ಪೋಷಕರು ಬಟ್ಟೆ ಕೊಡಿಸಲು ನಿರಾಕರಿಸಿದ್ದಾರೆ. ಇದರಿಂದ ಮನನೊಂದು ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಬಾತ್ ರೂಮ್ ನಲ್ಲಿ ನೇಣು ಹಾಕಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!