ಕಾಣಿಯೂರು ಗುಂಪಿನಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಶಕುಂತಲಾ ಶೆಟ್ಟಿ
ಪುತ್ತೂರು : ಕಾಣಿಯೂರು ಎಂಬಲ್ಲಿ ಕೆಲವು ದಿನಗಳ ಹಿಂದೆ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದವರನ್ನು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿಯವರು ಭೇಟಿಯಾಗಿ ಸಾಂತ್ವನ ಹೇಳಿ, ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.





