ಕೊಟ್ಟಿಗೆಹಾರ: ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಉರುಳಿದ ಕಾರು: ಕಾರಿನಲ್ಲಿದ್ದ ಐವರಿಗೆ ಗಾಯ
ಕೊಟ್ಟಿಗೆಹಾರ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಇಳಿದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡ ಅವಘಡ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಘಲ್ಗುಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಐವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದರು ಎಂದು ತಿಳಿದು ಬಂದಿದೆ.





