ಟೀಂ ಇಂಡಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪುರುಷರಷ್ಟೇ ಸಮಾನ ಶುಲ್ಕ: ಬಿಸಿಸಿಐ ಘೋಷಣೆ
ಮುಂಬೈ: ಟೀಂ ಇಂಡಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪಂದ್ಯಗಳಿಗೆ ಪುರುಷರಷ್ಟೇ ಸಮಾನ ಶುಲ್ಕ ನೀಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿಸಿದ್ದಾರೆ. ತಾರತಮ್ಯವನ್ನು ತೊಡೆದುಹಾಕುವ ನಿಟ್ಟಿನಲ್ಲಿ ಬಿಸಿಸಿಐ ಮೊದಲ ಹೆಜ್ಜೆಯನ್ನು ಇಟ್ಟಿದ್ದು, ಈ ನಿರ್ಧಾರವನ್ನು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಬಿಸಿಸಿಐ ಜೊತೆಗೆ ಒಪ್ಪಂದ ಮಾಡಿಕೊಂಡ ಮಹಿಳಾ ಕ್ರಿಕೆಟಿಗರಿಗೆ ನಾವು ವೇತನ ಇಕ್ವಿಟಿ ನೀತಿಯನ್ನು ಜಾರಿಗೆ ತರುತ್ತಿದ್ದೇವೆ.
ಭಾರತೀಯ ಕ್ರಿಕೆಟ್ನಲ್ಲಿ ಲಿಂಗ ಸಮಾನತೆಯ ಹೊಸ ಯುಗಕ್ಕೆ ನಾವು ಸಾಗುತ್ತಿದ್ದೇವೆ. ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಶುಲ್ಕ ಒಂದೇ ಆಗಿರುತ್ತದೆ ಎಂದು ಹೇಳಿದ್ದಾರೆ.