February 3, 2026

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ – ಎನ್‌ಐಎ ತನಿಖೆಗೆ ಆದೇಶಿಸಿದ ಕೇಂದ್ರ

0
IMG-20221027-WA0017.jpg

ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆಗೆ ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ.

ಎನ್‌ಐಎ ತನಿಖೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶಿಫಾರಸು ಮಾಡಿದ ಒಂದು ದಿನದ ಬಳಿಕ ಗೃಹ ಸಚಿವಾಲಯದ ಭಯೋತ್ಪಾದನೆ ನಿಗ್ರಹ ಮತ್ತು ಮೂಲಭೂತವಾದ (ಸಿಟಿಸಿಆರ್) ವಿಭಾಗವು ಈ ಆದೇಶವನ್ನು ಹೊರಡಿಸಿದೆ.

ಇನ್ನು ಕೊಯಮತ್ತೂರಿನ ಉಕ್ಕಡಂ ಪ್ರದೇಶದಲ್ಲಿ ಕಾರಿನಲ್ಲಿ ಸಂಭವಿಸಿದ ಎಲ್ ಪಿಜಿ ಸಿಲಿಂಡರ್ ಸ್ಫೋಟಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಇದುವರೆಗೆ ಆರು ಜನರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!