ಸುಳ್ಯ: ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ಸುಳ್ಯ ಸರ್ಕಾರಿ ಆಸ್ಪತ್ರೆಗೆ ಬೇಟಿ
ಸುಳ್ಯ: ತಾಲೂಕು ಕಾನೂನು ಸೇವೆಗಳ ಸಮಿತಿ ಇದರ ಅಧ್ಯಕ್ಷ ಹಿರಿಯ ನ್ಯಾಯಾಧೀಶ ಸೋಮಶೇಖರ ಎ. ಇಂದು ಸುಳ್ಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಯುಷ್ಮಾನ್ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ಪಡೆದರು.
ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ನವೆಂಬರ್ 13ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಲಿರುವ ಮೇಗಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಆಯುಷ್ಮಾನ್ ಕಾರ್ಡ್ ಸೌಲಭ್ಯ ಒದಗಿಸಿಕೊಡುವ ಬಗ್ಗೆ ಆರೋಗ್ಯಧಿಕಾರಿ ಡಾ. ಕರುಣಾಕರರವರೊಂದಿಗೆ ಚರ್ಚೆ ನಡೆಸಿದರು.

ನಂತರ ಕಾನೂನು ಅರಿವು ಕಾರ್ಯಕ್ರಮದ ಅಂಗವಾಗಿ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಪ್ಪ ಗೌಡ ಎ ಪಿ ಪಿ ಜನಾರ್ಧನ್ ಬಿ, ವಕೀಲರ ಗಳಾದ ರಾಮಚಂದ್ರ ಶ್ರೀಪಾದ ಹೆಗಡೆ, ಚಂದ್ರಶೇಖರ ಬಿ, ಮನೋಜ್ ಕುಮಾರ್, ಪ್ರಕಾಶ್ ಕೆ ಪಿ ಮೊದಲಾದವರು ಉಪಸ್ಥಿತರಿದ್ದರು.





