ಮಂಗಳೂರು: ಪ್ರತಿಭಾ ಕುಳಾಯಿ ವಿರುದ್ದ ಅವಹೇಳನಕಾರಿ ಪೋಸ್ಟ್ -ಆರೋಪಿಗಳನ್ನು ಬಂಧಿಸುವಂತೆ ಬಿಲ್ಲವ ಸಂಘಟನೆ ಮನವಿ
ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿರುವ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳೂರು ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಅವರಿಗೆ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ಇಂದು ಮನವಿ ಸಲ್ಲಿಸಲಾಯಿತು.
ನಗರದ ಕಮೀಷನರ್ ಕಚೇರಿಯಲ್ಲಿ ಬಿಲ್ಲವ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದ್ದು, ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸಿಲ್ಲ, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಮಾಜದ ಸ್ವಾಸ್ಥ ಕೆಡಿಸುವ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂಧರ್ಭದಲ್ಲಿ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್, ಗೆಜ್ಜೆಗಿರಿ ಉಪಾಧ್ಯಕ್ಷ ರವಿ ಪೂಜಾರಿ, ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣ ಗುರು ಸಮಾಜದ ಸೇವಾ ಸಂಘದ ಸಲಹೆಗಾರ ಅನಂದ್ ಅಮೀನ್, ಕುಳಾಯಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ ಬಂಗೇರ, ಸಂಘಟನಾ ಕಾರ್ಯದರ್ಶಿ ರಾಜೇಶ್ ಕುಳಾಯಿ, ರಾಜೇಂದ್ರ ಚಿಲಿಂಬಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




