ಹರ್ಷ ಕುಟುಂಬದ ಸದಸ್ಯರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕಂಡು ಬಂದಿಲ್ಲ: ಎಸ್ಪಿ ಮಿಥುನ್
ಶಿವಮೊಗ್ಗ: ಕೆಲವು ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬದ ಸದಸ್ಯರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗಿದೆ. ಆದರೆ, ಈವರೆಗೆ ಬೆದರಿಕೆ ಹಾಕಿರುವುದಕ್ಕೆ ಪೂರಕವಾದ ಅಂಶಗಳು ಕಂಡುಬಂದಿಲ್ಲ ಎಂದು ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಹರ್ಷ ಸಹೋದರಿ ಅಶ್ವಿನಿ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಶಿವಮೊಗ್ಗಕ್ಕೆ ರಕ್ಷಣೆ ನೀಡಲು ಇಲಾಖೆ ಸಿದ್ಧವಿದೆ. ಘಟನೆ ಕುರಿತು ದೊಡ್ಡಪೇಟೆ ಠಾಣೆ ಪೊಲೀಸರ ಮೇಲೆ ಯಾವುದೇ ಒತ್ತಡ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.




