ಉದ್ಯಮಿ ಎಲಾನ್ ಮಸ್ಕ್ ಕೈಸೇರಿದ ಟ್ವಿಟರ್ – ಸಿಇಒ ಪರಾಗ್ ಅಗರ್ವಾಲ್ ಸೇರಿ ಅನೇಕರು ವಜಾ
ಉದ್ಯಮಿ ಎಲಾನ್ ಮಸ್ಕ್ ಅವರು 44 ಶತಕೋಟಿ ಡಾಲರ್ ಗೆ ಟ್ವಿಟರ್ ಅನ್ನು ಖರೀದಿಸುವ ಪ್ರಕ್ರಿಯೆ ಪೂರ್ಣಗೊಳಿಸುವ ಮೂಲಕ ಟ್ವಿಟರ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.
ಎಲೋನ್ ಮಸ್ಕ್ ಮಾಲೀಕರಾದ ಬೆನ್ನಲ್ಲೇ ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್ ಮತ್ತು ಸಿಎಫ್‌ಒ ನೆಡ್ ಸೆಗಲ್ ಅವರನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ.
ಇನ್ನು ಟ್ವಿಟರ್ನಲ್ಲಿ ನಕಲಿ ಖಾತೆಗಳಿಗೆ ಕಡಿವಾಣ ಹಾಕಬೇಕಿದ್ದು, ಸಾರ್ವಜನಿಕವಾಗಿ ಯಾವುದೇ ಪೋಸ್ಟ್ಗಳು ಹೇಗೆ ಕಾಣಿಸುತ್ತವೆ ಎಂಬದನ್ನು ಪತ್ತೆ ಮಾಡಲು ಟ್ವಿಟರ್ನ ವ್ಯವಸ್ಥೆಗಳನ್ನು ಮಾರ್ಪಡಿಸಬೇಕು ಎಂದು ಮಸ್ಕ್ ಹೇಳಿದ್ದಾರೆ.





