ಜ್ವರದಿಂದ ಬಳಲುತ್ತಿದ್ದ ಮಹಿಳೆಗೆ ತಪ್ಪಾದ ಇಂಜೆಕ್ಷನ್ ನೀಡಿದ ವೈದ್ಯರು: ಆರೋಗ್ಯ ಏರುಪೇರಾಗಿ ಮಹಿಳೆ ಸಾವು
ತಿರುವನಂತಪುರಂ: ಜ್ವರದಿಂದ ಬಳಲುತ್ತಿದ್ದ 45 ವರ್ಷದ ಮಹಿಳೆಯೊಬ್ಬರಿಗೆ ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ ಸಾವನ್ನಪ್ಪಿರುವ ಘಟನೆ ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.
ಮೃತರನ್ನು ಕೋಯಿಕ್ಕೋಡ್‍ನ ಕೂಡರಂಜಿ ನಿವಾಸಿ ಸಿಂಧು ಎಂದು ಗುರುತಿಸಲಾಗಿದೆ. ನರ್ಸ್ ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಸಿಂಧು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಗುರುವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿಂಧು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ ಚೆನ್ನಾಗಿಯೇ ಇದ್ದರು, ಆದರೆ ನರ್ಸ್ ತಪ್ಪಾದ ಇಂಜೆಕ್ಷನ್ ನೀಡಿದ ಬಳಿಕ ಅವರ ಆರೋಗ್ಯ ಹದಗೆಡಲು ಪ್ರಾರಂಭವಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.