ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯಿಂದ ಮದ್ಯಪಾನ ಪಾರ್ಟಿ: ವೀಡಿಯೋ ವೈರಲ್

ಹೈದರಾಬಾದ್: ತೆಲಂಗಾಣದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿ ಮದ್ಯದ ಪಾರ್ಟಿ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ತೆಲಂಗಾಣದ ಹನಮಕೊಂಡ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹನಮಕೊಂಡದ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಆಸ್ಪತ್ರೆ ಆವರಣದಲ್ಲೇ ಕುಳಿತುಕೊಂಡು ಮದ್ಯ ಸೇವಿಸುತ್ತಿರುವ ದೃಶ್ಯವನ್ನು ರೋಗಿಯ ಸಂಬಂಧಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು, ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.