March 22, 2026

ಮಂಗಳೂರು: ಜನಾರ್ದನ ಪೂಜಾರಿಯವರ ಮನೆಗೆ ಭೇಟಿ ನೀಡಲಿರುವ ಬಿ.ಎಸ್ ಯಡಿಯೂರಪ್ಪ

0
IMG-20221028-WA0020.jpg

ಮಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಸಂಜೆ (ಅಕ್ಟೋಬರ್ 28 ) ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿಯವರ ಮನೆಗೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಂಗಳೂರಿನಲ್ಲಿ ನಡೆಯುವ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮಾಜಿ ಸಿಎಂ ಯಡಿಯೂರಪ್ಪ ಕಾರ್ಯಕ್ರಮದ ಬಳಿಕ ಬಂಟ್ವಾಳದ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಇನ್ನು ಯಾವ ಕಾರಣಕ್ಕಾಗಿ ಭೇಟಿಯಾಗಲಿದ್ದಾರೆ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ. ಕೆಲವು ಮೂಲದ ಮಾಹಿತಿ ಪ್ರಕಾರ ಕೆಲವೊಂದು ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.. ಅದರೆ ಇದು ಕೇವಲ ಸೌಹಾರ್ದಯುತ ಭೇಟಿ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!