ಮಂಗಳೂರು: ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ ಯುವಕ
ಮಂಗಳೂರು: ಗುರುಪುರದಲ್ಲಿ ಯುವಕನೊಬ್ಬ ಸೇತುವೆಯ ಮೇಲೆ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿರುವ ಘಟನೆ ನಡೆದಿದೆ.
ನದಿಗೆ ಹಾರಿದ ವ್ಯಕ್ತಿಯನ್ನು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಎಂದು ಗುರುತಿಸಲಾಗಿದೆ.

ಇನ್ನು ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ಗುರುವಾರ ಸಾಯಂಕಾಲ 7 ಗಂಟೆಯ ಸುಮಾರಿಗೆ ಗುರುಪುರ ಸೇತುವೆಯ ಬಳಿ ಬಂದು ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದು, ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




