400 ಹಿಂದೂಗಳ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ: ಪ್ರಕರಣ ದಾಖಲು

ಲಕ್ನೋ: ಕೋವಿಡ್ ಸಮಯದಲ್ಲಿ 400 ಮಂದಿ ಹಿಂದೂಗಳ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಿದ ಆರೋಪದಲ್ಲಿ ಉತ್ತರಪ್ರದೇಶದ ಮೀರತ್ ನಲ್ಲಿ ಒಂಬತ್ತು ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ತಮ್ಮನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆಮಿಷ ಒಡ್ಡಲಾಗಿದೆ ಎಂದು ಸಂತ್ರಸ್ಥರು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಘಟನೆ ಮೀರತ್ ನ ಮಂಗಟ್ ಪುರಂನ ಮಲಿನ್ ಗ್ರಾಮದಲ್ಲಿ ನಡೆದಿದೆ.
ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಹಿಂದೂ ದೇವರು, ದೇವತೆಗಳ ಫೋಟೋಗಳನ್ನು ತೆಗೆದು ಹಾಕುವಂತೆ ನಮಗೆ ಒತ್ತಾಯ ಮಾಡಲಾಗಿತ್ತು. ಕೋವಿಡ್ ಸಮಯದಲ್ಲಿ ನಮ್ಮನ್ನು ಬಲವಂತಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.