ಜಾನುವಾರುಗಳಿಗೆ ಢಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್ – ರೈಲಿನ ಮುಂಭಾಗಕ್ಕೆ ಹಾನಿ
ವಂದೇ ಭಾರತ್ ರೈಲು ಇಂದು ಮುಂಬೈ ಸೆಂಟ್ರಲ್ ವಿಭಾಗದ ಅತುಲ್ ಬಳಿ ಜಾನುವಾರುಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಈ ಕುರಿತು ಭಾರತೀಯ ರೈಲ್ವೆ ಇಲಾಖೆ ಟ್ವೀಟ್ ಮಾಡಿದ್ದು, ರೈಲಿನ ಮುಂಭಾಗದ ಕೋಚ್ ಅಂದರೆ ಡ್ರೈವರ್ ಕೋಚ್‌ನ ಮೂಗಿನ ಕೋನ್ ಕವರ್‌ಗೆ ಹಾನಿಯಾಗಿರುವುದನ್ನು ಹೊರತುಪಡಿಸಿ ರೈಲಿಗೆ ಯಾವುದೇ ಹಾನಿಯಾಗಿಲ್ಲ. ರೈಲು ಸರಾಗವಾಗಿ ಚಲಿಸುತ್ತಿದೆ ಎಂದು ಹೇಳಿದೆ.
ಅಕ್ಟೋಬರ್ 6 ರಂದು ಗುಜರಾತ್‌ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಅಕ್ಟೋಬರ್ 7 ಸಂಭವಿಸಿದ ಎರಡನೇ ಘಟನೆಯಲ್ಲಿ, ಮುಂಬೈಗೆ ತೆರಳುತ್ತಿದ್ದಾಗ ಗುಜರಾತ್‌ನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿದ್ದು, ಇದೀಗ ಒಂದೇ ತಿಂಗಳಲ್ಲಿ ಮೂರನೇ ಬಾರಿಗೆ ಜಾನುವಾರುವಿಗೆ ರೈಲು ಢಿಕ್ಕಿ ಹೊಡೆದಿದೆ.





