July 3, 2026

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ದ.ಕ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ

0
IMG-20221029-WA0051.jpg

ವಿಟ್ಲ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ವಿಠಲ ವಿದ್ಯಾ ಸಂಘ ವಿಟ್ಲ, ವಿಠಲ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಾಯತ್ರಿ ಎ ಅವರು ಉದ್ಘಾಟಿಸಿ ಮಾತನಾಡಿ ಕ್ರೀಡಾಕೂಟದಲ್ಲಿ ಸೋಲು ಮತ್ತು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿದಾಗ ನಿಜವಾದ ಕ್ರೀಡಾಪಟುವಿನ ಲಕ್ಷಣವಾಗಿದೆ. ಕ್ರೀಡಾಕೂಟದಲ್ಲಿ ಕ್ರೀಡಾಸ್ಫೂರ್ತಿ ಮೆರೆದಾಗ ಮುಂದಿನ ದಿನಗಳಲ್ಲಿ ಜೀವನದಲ್ಲಿ ಯಶಸ್ವಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಸಂಯೋಜಕ ಅರುಣ್ ಡಿ ಸೋಜ, ವಿಠಲ ವಿದ್ಯಾ ಸಂಘದ ಸಂಚಾಲಕ ಎಲ್ ಎನ್ ಕೂಡೂರು, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೆ.ವಿ, ಸದಸ್ಯರಾದ ಎಂ ನಿತ್ಯಾನಂದ ನಾಯಕ್, ಪದ್ಮಯ್ಯ ಗೌಡ, ಸದಾಶಿವ ಬನ, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉದಯ ನಾಯಕ್, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!