ಜಮ್ಮು ಕಾಶ್ಮೀರದಲ್ಲಿ ಮೆಗಾ ಪವರ್ ಪ್ರಾಜೆಕ್ಟ್ ಸೈಟ್‌ನಲ್ಲಿ ಭೂ ಕುಸಿತ: ಒರ್ವ ಮೃತ್ಯು, ಹಲವರು ಅವಶೇಷಗಳಡಿ
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬೃಹತ್ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿ ಜೆಸಿಬಿ ಚಾಲಕ ಸಾವನ್ನಪ್ಪಿ ಹಲವರು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ.
ಭೂಕುಸಿತದಲ್ಲಿ ಸಿಕ್ಕಿಬಿದ್ದ ಚಾಲಕನ ರಕ್ಷಣೆಗೆ ತಂಡ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿಯೂ ಕಾರ್ಯಾಚರಣೆ ನಡೆಯುತ್ತಿದೆ.

ಈ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದು, ‘ಸುಮಾರು ಆರು ಜನರ ರಕ್ಷಣಾ ತಂಡವು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ನಿರ್ಮಾಣ ಹಂತದಲ್ಲಿರುವ ರಾಟ್ಲೆ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಸಂಭವಿಸಿದ ಭೀಕರ ಭೂಕುಸಿತದ ವರದಿಯನ್ನು ಸ್ವೀಕರಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಡಿಸಿ ಕಿಶ್ತ್ವಾರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.





