December 15, 2025

ಮಿಜೋರಾಂನಲ್ಲಿ ಪೆಟ್ರೋಲ್ ಟ್ಯಾಂಕರ್‌ ಸ್ಫೋಟ: ನಾಲ್ವರು ಮೃತ್ಯು, ಅನೇಕರ ಸ್ಥಿತಿ ಗಂಭೀರ

0
IMG-20221030-WA0003.jpg

ಮಿಜೋರಾಂ: ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಡೆದಿದೆ.

ಶನಿವಾರ ಸಂಜೆ 6 ಗಂಟೆಗೆ ತುಯಿರಿಯಾಲ್ ಗ್ರಾಮದಲ್ಲಿ ಟ್ಯಾಂಕರ್ ಚಂಫೈಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಚಂಫೈಗೆ ಹೋಗುತ್ತಿದ್ದ ಟ್ಯಾಂಕರ್‌ನಿಂದ ಪೆಟ್ರೋಲ್ ಸೋರುತ್ತಿದ್ದು, ಅದನ್ನು ಸಂಗ್ರಹಿಸಲು ಸ್ಥಳೀಯರು ಯತ್ನಿಸಿದಾಗ ಟ್ಯಾಂಕರ್‌ಗೆ ಬೆಂಕಿ ತಗುಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!