ಕಡಬ: ಕಾರು ಮತ್ತು ಜೀಪ್ ನಡುವೆ ಅಪಘಾತ: ಇಬ್ಬರು ಗಾಯ
ಕಡಬ: ಕಾರು ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಆಗಮಿಸುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.





