ಡೀಸೆಲ್ ಖಾಲಿಯಾಗಿ ಮಾರ್ಗ ಮಧ್ಯೆಯೇ ನಿಂತ ಆಂಬ್ಯುಲೆನ್ಸ್ – ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಮಧ್ಯಪ್ರದೇಶ: ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯನ್ನು ಆಂಬ್ಯುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವಾಗ ಡೀಸೆಲ್ ಖಾಲಿಯಾಗಿ ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ.
ರೇಷ್ಮಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು,108 ಆಂಬುಲೆನ್ಸ್ ಗ್ರಾಮಕ್ಕೆ ಬಂದು ಮಹಿಳೆಯನ್ನು ಶಹನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸುವಾಗ ಆರೋಗ್ಯ ಕೇಂದ್ರ ತಲುಪುವ ಮೊದಲೇ ಆಂಬುಲೆನ್ಸ್‌ನಲ್ಲಿ ಡೀಸೆಲ್ ಖಾಲಿಯಾಗಿ ನಿರ್ಜನ ಸ್ಥಳದಲ್ಲಿ ನಿಂದಿದೆ.

ಇನ್ನು ಈ ಸಂಧರ್ಭದಲ್ಲಿ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾದ್ದರಿಂದ ಕುಟುಂಬಸ್ಥರು ರಸ್ತೆ ಬದಿಯಲ್ಲೇ ಟಾರ್ಚ್ ಬೆಳಕಿನಲ್ಲಿ ಹೆರಿಗೆ ಮಾಡಿಸಿದ್ದಾರೆ.





