ರಾಷ್ಟ್ರೀಯ ಮಟ್ಟದ ಕುಸ್ತಿಪಟು ನಿಶಾ ದಹಿಯಾ ಹತ್ಯೆ ಸುಳ್ಳು ವದಂತಿ:
ಆರೋಗ್ಯವಾಗಿದ್ದೇನೆ ಎಂದು ಸ್ಪಷ್ಟಪಡಿಸಿದ ವಿಡಿಯೋ ರಿಲೀಸ್
ಹರ್ಯಾಣ: ರಾಷ್ಟ್ರೀಯ ಮಟ್ಟದ ಕುಸ್ತಿಪಟು ನಿಶಾ ದಹಿಯಾ ಅವರು ಹರ್ಯಾಣದಲ್ಲಿ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ವರದಿಗಳ ನಂತರ ತಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಎಂದು ಸ್ಪಷ್ಟಪಡಿಸುವ ವೀಡಿಯೊವನ್ನು ಬುಧವಾರ ಬಿಡುಗಡೆ ಮಾಡಿದೆ.
ವೀಡಿಯೊದಲ್ಲಿ, ನಿಶಾ ದಹಿಯಾ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಮತ್ತು ಇದೀಗ ಪಂದ್ಯಾವಳಿಗಾಗಿ ಗೊಂಡಾನಲ್ಲಿದ್ದಾರೆ ಎಂದು ಹೇಳಿದ್ದಾರೆ. ಹರಿಯಾಣದ ಸೋನೆಪತ್‌ನ ಹಲಾಲ್‌ಪುರ್‌ನಲ್ಲಿರುವ ಸುಶೀಲ್ ಕುಮಾರ್ ವ್ರೆಸ್ಲಿಂಗ್ ಅಕಾಡೆಮಿಯಲ್ಲಿ ತಾನು ಮತ್ತು ಆಕೆಯ ಸಹೋದರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಗಳು ಹೇಳಿದ ನಂತರ ನಿಶಾ ದಹಿಯಾ ಅವರು ವೀಡಿಯೊವನ್ನು ಬಿಡುಗಡೆ ಮಾಡಿದರು.

ನಿಶಾ ದಹಿಯಾ ಅವರಿಗೆ ಶೂಟ್ ಮಾಡಿ ಕೊಂದ ಸುದ್ದಿ ಹರಡುತ್ತಿದ್ದಂತೆ ಆಕೆ ಕೊಲೆಯಾದ ಹರಿಯಾಣದ ಸೋನಿಪತ್ನಲ್ಲಿರುವ ಸುಶೀಲ್ ಕುಮಾರ್ ಅಕಾಡೆಮಿಗೆ ಬೆಂಕಿ ಹಚ್ಚಿ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹರ್ಯಾಣದ ಸೋನೆಪತ್‌ನ ಹಲಾಲ್‌ಪುರದಲ್ಲಿರುವ ಸುಶೀಲ್ ಕುಮಾರ್ ಅಕಾಡೆಮಿಯಲ್ಲಿ ರಾಷ್ಟ್ರೀಯ ಮಟ್ಟದ ಕುಸ್ತಿಪಟು ನಿಶಾ ದಹಿಯಾ ಮತ್ತು ಆಕೆಯ ಸಹೋದರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂದು ಸಂಜೆ ಅಪರಿಚಿತ ದುಷ್ಕರ್ಮಿಗಳು ಅವರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ನಿಶಾ ದಹಿಯಾ ಅವರ ತಾಯಿಗೂ ಗಾಯವಾಗಿದ್ದು, ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಆಕೆಯನ್ನು ರೋಹ್ಟಕ್‌ನ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ನಿಶಾ ದಹಿಯಾ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.





