ಉಡುಪಿ: ಬೈಕ್ ಮತ್ತು ಕಾರು ನಡುವೆ ಅಪಘಾತ – ಯುವಕ ಮೃತ್ಯು

ಉಡುಪಿ:ಹಿರಿಯಡ್ಕ ಪದವಿ ಪೂರ್ವ ಸರಕಾರಿ ಕಾಲೇಜು ಬಳಿ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಹಿರಿಯಡ್ಕ ಸಮೀಪದ ಪುತ್ತಿಗೆ ನಿವಾಸಿ ಸ್ಟಾಲಿನ್ (18) ಎಂದುಗುರುತಿಸಲಾಗಿದೆ.
ಸ್ಟಾಲಿನ್ ಹಿರಿಯಡ್ಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಸ್ಕೋಡಾ ಕಾರು ಈ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸಮೇತ ರಸ್ತೆಗೆ ಬಿದ್ದ ಸ್ಟಾಲಿನ್ ಅವರ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಅದೇ ಸಮಯದಲ್ಲಿ ಸ್ಟಾಲಿನ್ ಅವರ ಬೈಕ್‌ಗೆ ಹಿಂಬದಿಯಿಂದ ಬಂದ ಇಕೋ ಸ್ಪೋರ್ಟ್ಸ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಪೊದೆಗೆ ನುಗ್ಗಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.