ಜಮ್ಮು ಕಾಶ್ಮೀರದ ಎಎಪಿ ನಾಯಕ ಸೇರಿ ಎಂಟು ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಜಮ್ಮು ಕಾಶ್ಮೀರದ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸತೀಶ್ ಶರ್ಮಾ ಶಾಸ್ತ್ರಿ ಸೇರಿದಂತೆ ಇತರ ಎಂಟು ಮಂದಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಜಮ್ಮು ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಮತ್ತು ಸಂಸದ ಜುಗುಲ್ ಕಿಶೋರ್ ಶರ್ಮಾ ಅವರು ಬಿಜೆಪಿಗೆ ಸೇರ್ಪಡೆಯಾದ ಎಎಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಬಿಜೆಪಿ ಸೇರ್ಪಡೆಯಿಂದ ನನ್ನ ಉತ್ಸಾಹ ಇಮ್ಮಡಿಯಾಗಿದ್ದು, ಸಮಾಜಕ್ಕಾಗಿ ತೊಡಗಿಸಿಕೊಳ್ಳುವ ಮೂಲಕ ಜನರ ಅಭಿವೃದ್ದಿ ಮತ್ತು ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಕೆಲಸ ಮಾಡುತ್ತೇನೆ ಎಂದು ಈ ವೇಳೆ ಸತೀಶ್ ಶರ್ಮಾ ಹೇಳಿದ್ದಾರೆ.