October 18, 2024

ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ -ಪ್ರತಿ ಲೀಟರ್‌‌ಗೆ 3 ರೂ. ಹೆಚ್ಚಳ

0

ಬೆಳಗಾವಿ: ನಂದಿನಿ ಹಾಲಿನ ದರ ಶೀಘ್ರದಲ್ಲೇ ಪರಿಷ್ಕರಣೆ ಮಾಡಲಾಗುತ್ತಿದ್ದು, ಪ್ರತಿ ಲೀಟರ್‌ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.ದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದ್ದು ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು, ಕೆಎಂಎಫ್ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ ಎಂದರು.

ಇನ್ನು ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದ್ದು, ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!